ಮುಂಬೈ: ಚಲಿಸುತ್ತಿರುವ ರೈಲು, ಬಸ್ ಹತ್ತದಂತೆ ಎಷ್ಟೋ ಬಾರಿ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ ಅದರಿಂದ ಆಗುವ ಅನಾಹುತಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣ ಸಿಗುತ್ತವೆ. ಹೀಗಿದ್ದರೂ ಅವಸರದ ಹಿಂದೆ ಬಿದ್ದ ಜನ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಾರೆ. ಇಂತಹದ್ದೇ ಘಟನೆಯೊಂದು ಮಹಾರಾಷ್ಟ್ರದ ವಾಸಯ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಲಿಸುತ್ತಿದ್ದ ರೈಲನ್ನು ಹತ್ತಲು ಓರ್ವ ವ್ಯಕ್ತಿ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಆಯತಪ್ಪಿ ಆತ ಪ್ಲಾಟ್ಫಾರ್ಮ್ ಮೇಲೆ ಬಿದ್ದಿದ್ದಾನೆ. ಪರಿಣಾಮ ಆ ವ್ಯಕ್ತಿ ಟ್ರೈನ್ ಜೊತೆಗೆ ಸ್ವಲ್ಪ ದೂರ ಬಂದಿದ್ದಾನೆ. ಇದನ್ನ ಗಮನಿಸಿದ ಯೋಧ ಕೂಡಲೇ ಕಾರ್ಯಪ್ರವೃತ್ತರಾಗಿ ಅವನನ್ನ ಕಾಪಾಡಿದ್ದಾರೆ.
ಜನವರಿ 23 ರಂದು ಈ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯೋಧನ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ.
PublicNext
25/01/2022 08:41 am