ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಬೆಳೆಗೆ ಬೆಂಕಿ

ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು, ಕಟಾವಿಗೆ ಬಂದಿದ್ದ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಿರಕೊರನಹಳ್ಳಿಯಲ್ಲಿ ನಡೆದಿದೆ.

ರೈತ ಹನ್ನಿ ಬಸನಗೌಡ ಅವರಿಗೆ ಸೇರಿದ ಆರು ಎಕರೆ ಜಮೀನಿನಲ್ಲಿ ಕಬ್ಬು ಬೆಳೆಯಲಾಗಿತ್ತು, ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಯಿಂದ ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ನಾಶವಾಗಿ ಸುಮಾರು ಐದು ಲಕ್ಷ ರೂಪಾಯಿಗಳ ಬೆಳೆ ಬೆಂಕಿಗಾಹುತಿಯಾಗಿದ್ದು ರೈತ ಕಂಗಾಲಾಗಿದ್ದಾನೆ.

ಬೆಳಿಗ್ಗೆಯಿಂದ ಅಧಿಕಾರಿಗಳಿಗೆ ಕರೆ ಮಾಡಿದರೂ ತಲೆಕೆಡಿಸಿಕೊಳ್ಳದ ಕಾರಣ ಈಗ ಘಟನೆ ಸಂಭವಿಸಿದೆ ಎಂದು ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ವರ್ಷಕ್ಕೆ ಒಂದೇ ಬೆಳೆ ಬೆಳೆಯಲಾಗುತ್ತದೆ. ಕಬ್ಬು ಕಟಾವಿಗೆ ಪರವಾನಿಗೆ ಸಿಕ್ಕಿದ್ದು, ಮೈಲಾರ ಶುಗರ್ಸ್ ಸರಿಯಾದ ಸಮಯಕ್ಕೆ ಕಟಾವು ಮಾಡಿದ್ರೆ, ಈ ಅನಾಹುತ ತಪ್ಪಿಸಬಹುದಾಗಿತ್ತು ಎಂದು ಆಕ್ರೋಶ ಹೊರ ಹಾಕಿದ್ದಾಳೆ.

Edited By :
PublicNext

PublicNext

29/01/2022 03:49 pm

Cinque Terre

29.13 K

Cinque Terre

1

ಸಂಬಂಧಿತ ಸುದ್ದಿ