ಚಿತ್ರದುರ್ಗ: ಟ್ಯಾಂಕರ್ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್‌ನಲ್ಲಿ ನಡೆದಿದೆ. ಈ ಎರಡು ವಾಹನಗಳ ಚಿತ್ರದುರ್ಗ ಕಡೆಯಿಂದ ಬಂದಿದ್ದು ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗುಯಿಲಾಳ್ ಟೋಲ್‌ನಲ್ಲಿ ಗುರುವಾರ ಬೆಳಗ್ಗೆ 10 ರ ಸಮಯದಲ್ಲಿ ನಡೆದಿದೆ. ಮುಂದೆ ಟೋಲ್ ಇದೆ ಎಂಬುದನ್ನು ಗಮನಿಸದೆ ಕಾರು ಚಾಲಕ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಮೃತರೆಲ್ಲರೂ ಬೆಳಗಾವಿಯ ಸುಭಾಷ್ ನಗರದವರಾಗಿದ್ದು ರಮೇಶ್ ಶಾನುಭೋಗ್ (60), ವಿಶ್ವನಾಥ್ ಶಾನಭೋಗ್ (65), ಹಾಗೂ ಸೀಮಾ ಶಾನುಭೋಗ್ (55) ವರ್ಷ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಐಮಂಗಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
03/02/2022 09:26 pm