ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ರಸ್ತೆ ಅಪಘಾತ: ಐವರು ಸಾವು, ಓರ್ವನ ಸ್ಥಿತಿ ಗಂಭೀರ

ಲಕ್ನೋ: ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ರಾಮ್​ಪುರದ ತಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಮ್​ಪುರದ ತಾಂಡಾದ ಉಪವಿಭಾಗಾಧಿಕಾರಿ ರಾಜೇಶ್ ಕುಮಾರ್, 'ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಮೃತಪಟ್ಟಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಕಾರು ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

05/02/2022 04:59 pm

Cinque Terre

23.85 K

Cinque Terre

0

ಸಂಬಂಧಿತ ಸುದ್ದಿ