ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹೊರ ವಲಯದ ಕೆರೂರು ಕ್ರಾಸ್ ಬಳಿ ನಡೆದಿದೆ.
ಶ್ರೀಶೈಲ ಕೋರವಿ (27) ಹಾಗೂ ಸಂತೋಷ ಹುಜರೆ (28) ಸಾವನ್ನಪ್ಪಿದ ಸವಾರರು. ಕೆರೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಬೈಕ್ ಮೇಲೆ ಹರಿದ ಪರಿಣಾಮ ಸವಾರರು ಸಾವನ್ನಪ್ಪಿದ್ದಾರೆ. ಅಪಘಾತವಾಗುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕರಿಬ್ಬರು ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಅಂಕಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
17/02/2022 03:32 pm