ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಂದರಕ್ಕೆ ಉರುಳಿದ ವಾಹನ: ಮದುವೆಗೆ ಬಂದ 14 ಮಂದಿ ಸಾವು

ಡೆಹರಾಡೂನ್ : ಅವರೆಲ್ಲಾ ಖುಷಿಯಿಂದ ಮದುವೆ ಸಂಭ್ರಮದ ಗುಂಗಲ್ಲಿ ಮನೆಗೆ ವಾಪಸ್ಸಾಗುತ್ತಿದ್ದರು. ಆದರೆ ವಿಧಿಯಾಟಕ್ಕೆ ಮನೆ ಸೇರಬೇಕಾದ 14 ಜನ ಮಸಣ ಸೇರಿದ ಮನಕಲಕುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಉತ್ತರಾಖಂಡ ರಾಜ್ಯದ ಚಂಪಾವತ್ ಜಿಲ್ಲೆಯಲ್ಲಿನ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯಲ್ಲಿ ಕಂದರವೊಂದಕ್ಕೆ ವಾಹನ ಉರುಳಿ 14 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣೆ ಮತ್ತು ಪರಿಹಾರ ಕಾರ್ಯ ನಡೆಸಿದೆ.

ಫೆ.22 ರಂದು ನಸುಕಿನ ವೇಳೆ ಈ ಅವಘಡ ಸಂಭವಿಸಿದ್ದು, ವಾಹನವು ಕಂದರವೊಂದಕ್ಕೆ ಉರುಳಿದೆ. ಸ್ಥಳೀಯರು ಕೂಡ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಜತೆಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ ಪ್ರಕಟಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

Edited By : Nirmala Aralikatti
PublicNext

PublicNext

22/02/2022 04:48 pm

Cinque Terre

44.74 K

Cinque Terre

0

ಸಂಬಂಧಿತ ಸುದ್ದಿ