ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಮೂವರ ದುರ್ಮರಣ

ದಾವಣಗೆರೆ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ, ಮಹಿಳೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಹಾಲವರ್ತಿ ಗ್ರಾಮದ ಹನುಮಂತಪ್ಪ, ಕಿರಣ್ ಕುಮಾರ್ ಹಾಗೂ ದಾವಣಗೆರೆ ನಗರದ ಮಹಿಳೆಯೊಬ್ಬರು ಕೊನೆಯುಸಿರೆಳೆದಿದ್ದಾರೆ‌.

ಪೈಪ್ ಗಳನ್ನ ತುಂಬಿಕೊಂಡು ಹಾಲುವರ್ತಿ ಗ್ರಾಮಕ್ಕೆ ಟ್ರ್ಯಾಕ್ಟರ್ ತೆರಳುತಿತ್ತು. ಈ ವೇಳೆ ಆನಗೋಡು ಬಳಿ ಹಿಂದಿನಿಂದ ಬಂದು ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

01/03/2022 10:09 pm

Cinque Terre

128.7 K

Cinque Terre

1