ಕೊಪ್ಪಳ: ನಿಶ್ಚಿತಾರ್ಥಕ್ಕೆಂದು ಹೊರಟ್ಟಿದ್ದ ಟ್ರ್ಯಾಕ್ಟರ್ ವೊಂದು ಪಲ್ಟಿಯಾಗಿ ನಾಲ್ವರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕನಕಗಿರಿ ತಾಲೂಕು ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಸಂಭವಿಸಿದೆ.
ಕಾರಟಗಿ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಯಮನೂರಪ್ಪ ಸಿಂಧನೂರು (55) ಅಂಬಮ್ಮ (45) ಸ್ಥಳದಲ್ಲೇ ಮೃತಪಟ್ಟರೆ ದ್ಯಾವಮ್ಮ (60), ಶೇಷಪ್ಪ ಬಂಡಿ (40) ಕಾರಟಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇನ್ನು ಮದುವೆ ನಿಶ್ಚಯ ಮಾಡಲು ಕಾರಟಗಿಯಿಂದ ಕನಕಗಿರಿ ತಾಲೂಕಿನ ಶಿರವಾರ ಗ್ರಾಮಕ್ಕೆ ಹೊರಟಿದ್ದ ಟ್ರ್ಯಾಕ್ಟರ್ ಆಯ ತಪ್ಪ ಪಲ್ಟಿ ಆಗಿದೆ.
ಒಟ್ಟು ಟ್ರ್ಯಾಕ್ಟರ್ ನಲ್ಲಿ 25ಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದರು ಇನ್ನು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
11/03/2022 04:11 pm