ಗದಗ: ಸಾರಿಗೆ ಸಂಸ್ಥೆಯ ಬಸ್ ವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೋವನಾಳ ಹಾಗೂ ಯಲವಿಗಿ ಮಧ್ಯದಲ್ಲಿ ನಡೆದಿದೆ.
ಗದಗನಿಂದ ಹಾವೇರಿಗೆ ಹೊರಟಿದ್ದ ಬಸ್ ಗೋವಾನಳ ಸಮೀಪದ ಹಳ್ಳದಲ್ಲಿ ಪಲ್ಟಿಯಾಗಿದ್ದು, ರಸ್ತೆ ತಿರುವಿನಲ್ಲಿ ವೀಲ್ ಜೇಂಟ್ ಕಟ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಜಾರಿದೆ. ಅಲ್ಲದೇ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು, ಅಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಸುದ್ಧಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲವಿಗಿ ಗ್ರಾಮದ ಜನರು ಪೊಲೀಸರಿಗೆ ಹಾಗೂ ಅಂಬ್ಯುಲೆನ್ಸ್ ಸಿಬ್ಬಂದಿಗೆ ಮಾಹಿತಿ ನೀಡಿ ಪ್ರಯಾಣಿಕರನ್ನು ಆಸ್ಪತ್ರೆಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
PublicNext
14/03/2022 04:40 pm