ಪಾವಗಡ: ಬಸ್ ಉರುಳಿ ಬಿದ್ದು 8 ಜನ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಇನ್ನು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳದಲ್ಲಿ ಜಮಾಯಿಸಿದ ಜನ ಗಾಯಗೊಂಡವರ ರಕ್ಷಣಾ ಕಾರ್ಯಕ್ಕೆ ಸಹಕರಿಸುತ್ತಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಎಸ್‌ಪಿ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಲಿದ್ದಾರೆ. ಈಗಾಗಲೇ ಸ್ಥಳಕ್ಕೆ ಆಂಬುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಘಟನೆಗೆ ಕಾರಣವಾದ ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
PublicNext
19/03/2022 10:53 am