ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿ ನಡೆದಿದೆ.
ಮೃತರು ಗದಗ ನಗರದವರು ಎನ್ನಲಾಗುತ್ತಿದ್ದು, ಮೃತರಲ್ಲಿ ಓರ್ವರ ಹೆಸರು ದರ್ಶನ್ ಅಂತ ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಮುಲ್ಲಾ ಅವರು ಸ್ಥಿತಿ ಚಿಂತಾಜನಕವಾಗಿದೆ. ಉಳಿದವರ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ರೋಣ ಪಟ್ಟಣದಿಂದ ಗದಗ ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೆಂಕಿಯ ಕಿಡಿ ಹತ್ತಿ ಕೊಂಡು ಕಾರು ಹೊತ್ತಿ ಉರಿದಿದೆ. ಈ ವೇಳೆ ಇದೇ ಮಾರ್ಗದಲ್ಲಿ ಹೋಗುತ್ತಿದ್ದ ಲಾರಿ ಚಾಲಕ ಸಮಯ ಪ್ರಜ್ಞೆ ಮೆರೆದು ರಕ್ಷಣೆಗೆ ಧವಿಸಿದ್ದು, ಕಾರಿನಲ್ಲಿದ್ದವರನ್ನು ಹೊರ ತೆಗೆದಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರ ನೆರವು ಪಡೆದು ಆಸ್ಪತ್ರೆಗೆ ರವಾನಿಸಲು ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಓವರ್ ಟೆಕ್ ಮಾಡೋ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಅಂತ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
19/03/2022 07:06 pm