ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಧ್ಯರಾತ್ರಿ ಮನೆಗೆ ಬೆಂಕಿ ತಗುಲಿದೆ. ಪರಿಣಾಮ ಮನೆಯಲ್ಲಿದ್ದ ಎರಡು ಆಕಳು, ಒಂದು ಕರು, ನಗದು, ಬಟ್ಟೆ ಸೇರಿದಂತೆ ಎಲ್ಲ ವಸ್ತುಗಳು ಸುಟ್ಟು ಕರಕಲಾಗಿವೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಶಂಕ್ರಪ್ಪ ತೆರೆದಹಳ್ಳಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು ಯಾರೂ ಇಲ್ಲದ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಗ್ನಿ ದುರಂತ ನಡೆದಿದೆ.
PublicNext
23/03/2022 10:24 am