ಮಂಡ್ಯ: 50 ಜನ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದು 50 ಜನ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಣ್ಣನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹೌದು 50 ಜನ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಗಾಯಗೊಂಡವರಿಗೆ ಮದ್ದೂರಿನ ಭಾರತೀನಗರದ ಸರ್ಕಾರಿ ಆಸ್ಙತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
30/03/2022 11:36 am