ವಿಜಯಪುರ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮನಗೂಳಿ ಬಳಿ ನಡೆದಿದೆ.
ವಿಜಯಪುರದಿಂದ ತಾಳಿಕೋಟೆ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಸುಹಾಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗದಲ್ಲಿ ಬೈಕ್ ಸಿಲುಕಿದ್ದು, ಬೈಕ್ ಸವಾರರ ದೇಹಗಳು ಛಿದ್ರ ಛಿದ್ರವಾಗಿವೆ.
ಘಟನಾ ಸ್ಥಳಕ್ಕೆ ಮನಗೊಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಸವಾರರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
PublicNext
02/04/2022 09:07 am