ಬೀದರ್: ರಂಜಾನ್ ಹಬ್ಬಕ್ಕೆ ಬಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಧಗಧಗನೇ ಹೊತ್ತಿ ಉರಿದಿದೆ.
ಬೀದರ್ ತಾಲ್ಲೂಕಿನ ಸಿರ್ಸಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ಇಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡರೂ ಚಾಲಕ ವಿಠಲ್ ಈ ಬಗ್ಗೆ ನಿರ್ಲಕ್ಷ ತೋರಿದ್ದಾನೆ ಎನ್ನಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬಟ್ಟೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ನಿಷ್ಕಾಳಜಿ ತೋರಿದ ಚಾಲಕನ ವಿರುದ್ಧ ಬಗದಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
PublicNext
07/04/2022 04:05 pm