ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೋಪ್ ವೇಯಲ್ಲಿ ಕಾರು ದುರಂತ : 46 ಮಂದಿಗಾಗಿ ರಕ್ಷಣಾ ಕಾರ್ಯ ಚುರುಕು

ದಿಯೋಘರ್ : ಜಾರ್ಖಂಡ್ ನ ದಿಯೋಘರ್ ನ ತ್ರಿಕೂಟ ಬಳಿ ರೋಪ್ ವೇನಲ್ಲಿ ಕೆಲವು ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಕನಿಷ್ಠ 10 ಪ್ರವಾಸಿಗರು ಗಾಯಗೊಂಡಿದ್ದು, ಇಬ್ಬರು ಮಹಿಳಾ ಪ್ರವಾಸಿಗರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ರೋಪ್ ವೇಯಲ್ಲಿನ ಕನಿಷ್ಠ 12 ಕ್ಯಾಬಿನ್ ಗಳಲ್ಲಿ ಇನ್ನು 46 ಜನ ಸಿಲುಕಿಕೊಂಡಿರುವುದಾಗಿ ಮಾಹಿತಿ ಇದ್ದ ಹಿನ್ನೆಲೆಯಲ್ಲಿ ಅವರ ರಕ್ಷಣಾ ಕಾರ್ಯ ಮುಂದುವರೆದಿದೆ.

ರಕ್ಷಣಾ ಕಾರ್ಯಾಚರಣೆಗೆ ಎರಡು ಎಂಐ-17 ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದು ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ITBP ಮತ್ತು NDRF ತಂಡಗಳು ಕೂಡ ಸ್ಥಳಕ್ಕೆ ಧಾವಿಸಿವೆ.ಇನ್ನು ಈ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ತಾಂತ್ರಿಕ ದೋಷದಿಂದ ಈ ಘಟನೆ ಸಂಭವಿಸಿದ್ದು, ಕೇಬಲ್ ಕಾರುಗಳು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

11/04/2022 01:49 pm

Cinque Terre

103.22 K

Cinque Terre

2

ಸಂಬಂಧಿತ ಸುದ್ದಿ