ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ಅಪಘಾತ; ಓರ್ವ ಸಾವು, 25 ಜನರಿಗೆ ಗಾಯ.!

ಮುಂಬೈ: ಪುಣೆ-ಅಹ್ಮದ್‌ನಗರ ಹೆದ್ದಾರಿಯಲ್ಲಿ ಎದುರಿಗೆ ಬರುತ್ತಿದ್ದ ಬಸ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.

ಪುಣೆ ಜಿಲ್ಲೆಯ ಶಿಕ್ರಾಪುರ ತಾಲೂಕಿನ ಬಜರಂಗವಾಡಿ ಗ್ರಾಮದಲ್ಲಿ ಭಾನುವಾರ ರಾತ್ರಿ 11:25ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತರನ್ನು ಸ್ವಿಫ್ಟ್ ಕಾರು ಚಲಾಯಿಸುತ್ತಿದ್ದ ವಿಶಾಲ್ ಬಬನ್ ಸಾಸ್ವಾಡೆ (34) ಎಂದು ಗುರುತಿಸಲಾಗಿದೆ. ಗಾಯಗೊಂಡವರು ಬಸ್‌ನಲ್ಲಿದ್ದ ಪ್ರಯಾಣಿಕರಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಈ ದೃಶ್ಯವು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ರಾಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಹೇಮಂತ್ ಶೆಡ್ಗೆ, "ಸ್ವಿಫ್ಟ್ ಕಾರು ಪುಣೆ ಕಡೆಗೆ ಚಲಿಸುತ್ತಿತ್ತು. ಅತಿವೇಗದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಅಹಮದ್‌ನಗರದತ್ತ ಸಾಗುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕಕ್ಕೆ ಬಿದ್ದಿದೆ. ಪರಿಣಾಮ ಹೋಟೆಲ್‌ನ ಪಾರ್ಕಿಂಗ್ ಸ್ಥಳದಲ್ಲಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

11/04/2022 05:16 pm

Cinque Terre

60.61 K

Cinque Terre

0

ಸಂಬಂಧಿತ ಸುದ್ದಿ