ಆಂಧ್ರ ಪ್ರದೇಶ : ಆಂಧ್ರ ಪ್ರದೇಶದ ಏಲೂರಿನ ಅಕ್ಕಿರೆಡ್ಡಿಗುಡೆಂನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ನೈಟ್ರಿಕ್ ಆಸಿಡ್, ಮೊನೊಮಿಥೈಲ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಏಲೂರು ಎಸ್ಪಿ ರಾಹುಲ್ ದೇವ್ ಶರ್ಮಾ ತಿಳಿಸಿದ್ದಾರೆ.ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರಿಗೆ ತಲಾ 5 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
PublicNext
14/04/2022 08:48 am