ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳಿ ತಪ್ಪಿದ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು ಪಕ್ಕದ ರೈಲಿಗೆ ಡಿಕ್ಕಿ: ದುರಂತ ಜಸ್ಟ್ ಮಿಸ್

ಮುಂಬೈ: ದಾದರ್‌-ಪುದುಚೇರಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು ಗುರುವಾರ ರಾತ್ರಿ ಮುಂಬೈನ ಮಾತುಂಗಾ ರೈಲು ನಿಲ್ದಾಣದಲ್ಲಿ ಹಳಿ ತಪ್ಪಿದೆ. ಕರ್ನಾಟಕ ಮಾರ್ಗವಾಗಿ ಸಂಚರಿಸುವ ಈ ರೈಲು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ನಿಂತಿದ್ದ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲಿಗೆ ಉಜ್ಜಿಕೊಂಡು ಮುಂದೆ ಸಾಗಿದೆ. ಕೂಡಲೇ ರೈಲು ನಿಲ್ಲಿಸಿದ ಪರಿಣಾಮ ಘಟನೆಯಲ್ಲಿ ಯಾವುದೇ ಜೀವಹಾನಿ ಆಗಿಲ್ಲ.

ರಾತ್ರಿ 9.45ರ ಸುಮಾರಿಗೆ ದಾದರ್‌ನಿಂದ ಹೊರಟ ಕೆಲವೇ ನಿಮಿಷಗಳಲ್ಲಿ ರೈಲು ಹಳಿತಪ್ಪಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಆದರೆ ಮುಂಬೈನ ದಾದರ್‌ ಮಾರ್ಗದಲ್ಲಿ ಈ ಘಟನೆಯಿಂದ ರೈಲು ಸಂಚಾರ ಸ್ಥಗಿತಗೊಂಡು ರಾತ್ರಿ ಇಡೀ ಪ್ರಯಾಣಿಕರು ಪರದಾಡಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪದುಚೇರಿ-ದಾದರ್‌ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 11005) ಹಾಗೂ ಛತ್ರಪತಿ ಶಿವಾಜಿ ಟರ್ಮಿನಸ್‌-ಗದಗ (ರೈಲು ಸಂಖ್ಯೆ 11139) ರದ್ದುಪಡಿಸಲಾಗಿದೆ ಎಂದು ರೈಲ್ವೆ ಹೇಳಿದೆ.

Edited By : Nagaraj Tulugeri
PublicNext

PublicNext

16/04/2022 07:53 am

Cinque Terre

44.83 K

Cinque Terre

0

ಸಂಬಂಧಿತ ಸುದ್ದಿ