ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟದ ಇಳಿಜಾರಿನಲ್ಲಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ವೃದ್ಧೆಯೊಬ್ಬರಿಗೆ ಸಣ್ಣಪುಟ ಗಾಯಳಾಗಿದೆ.
ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ನಿಮಿತ್ತ ಭಕ್ತರನ್ನು ಕರೆತರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್‌ನಲ್ಲಿ 90ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಗಾಯಾಳು ವೃದ್ಧೆಯನ್ನು ಯಳಂದೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಅಂತಾ ಕೆಎಸ್ ಆರ್ ಟಿಸಿ ಡಿಸಿ ಮಂಜುನಾಥ ಮಾಹಿತಿ ನೀಡಿದ್ದಾರೆ.
PublicNext
17/04/2022 11:51 am