ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಉರುಳಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಚಿಕ್ಕೊಣತಿ ಗ್ರಾಮದ ಬಳಿ ನಡೆದಿದೆ.
ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಮತ್ತು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಸ್ಥಳಕ್ಕೆ ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
27/04/2022 07:26 am