ಗದಗ: ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಪೈಪೋಟಿ ನಡೆಸಿ ಬಸ್ ಚಲನೆ ಮಾಡಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಗದಗದಿಂದ ಹಾವೇರಿ ಕಡೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಗಳ ಚಾಲಕರು ಪೈಪೋಟಿ ನಡೆಸಿ ಬಸ್ ಚಲಾಯಿಸಿದ್ದಾರೆ. ಮುಳಗುಂದ ಪಟ್ಟಣದ ಹೊರವಲಯದಲ್ಲಿ ಓವರ್ ಟೇಕ್ ಮಾಡೋ ವೇಳೆ ಬಸ್ ರಸ್ತೆ ತಡೆಗೋಡೆಗೆ ಡಿಕ್ಕಿಯಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗದಗ ಮತ್ತು ಹಾವೇರಿ ಡಿಪೋ ಬಸ್ಗಳು ಜಖಂಗೊಂಡಿವೆ.
ಈ ಘಟನೆ ಬೆನ್ನಲ್ಲೇ ಎರಡೂ ಬಸ್ಗಳ ಚಾಲಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಬಸ್ ಚಾಲಕರ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
29/04/2022 04:42 pm