ರಾಮನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ.
ರಾಮನಗರ ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದ ಚಂದ್ರಶೇಖರ್ ಮೃತ ಹೆಡ್ ಕಾನ್ಸ್‌ಟೇಬಲ್. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಕಗ್ಗಲೀಪುರದಿಂದ ಬೈನ್ನಲ್ಲಿ ರಾಮನಗರಕ್ಕೆ ವಾಪಸ್ ಆಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಸೋಮವಾರ ಚಂದ್ರಶೇಖರ್ ಅವರ ವಿವಾಹ ವಾರ್ಷಿಕೋತ್ಸವ ಇತ್ತು. ಮುನ್ನಾದಿನವೇ ವಿಧಿ ಅವರ ಬಾಳಲ್ಲಿ ಆಟವಾಡಿಬಿಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
PublicNext
02/05/2022 10:18 am