ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಮಳಿಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ವಸ್ತುಗಳು !

ದಾವಣಗೆರೆ: ನಗರದ ಚೇತನ ಹೋಟೆಲ್ ಆವರಣದಲ್ಲಿನ ಮಳೆಗೆಯೊಂದರಲ್ಲಿ ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮನೆ ಬದಲಾಯಿಸುವ ಸಲುವಾಗಿ ಸಾಮಗ್ರಿಗಳನ್ನು ಗೋಡೌನ್ ನಲ್ಲಿ ಸಂಗ್ರಹಿಸಿಡಲಾಗಿತ್ತು. ಫ್ರಿಡ್ಜ್, ಟಿವಿ ಸೇರಿದಂತೆ ವಸ್ತುಗಳನ್ನ ಇಲ್ಲಿ ಇಟ್ಟಿದ್ದು, ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಈ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರಿಗೆ ಶಿಫ್ಟ್ ಆಗಿದ್ದ ಕುಟುಂಬವೊಂದು ಈ ಗೋಡೌನ್ ನಲ್ಲಿ ಮನೆಯ ಸಾಮಾಗ್ರಿಗಳನ್ನಿಟ್ಟಿದ್ದು, ತೆಗೆದುಕೊಂಡು ಹೋಗಲು ನಿರ್ಧರಿಸಿತ್ತು. ಆದ್ರೆ ಬೆಂಕಿ ಅನಾಹುತದಿಂದ ಲಕ್ಷಾಂತರ ರೂಪಾಯಿ ಹಾನಿ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌.

Edited By : Shivu K
PublicNext

PublicNext

04/05/2022 11:06 am

Cinque Terre

66.69 K

Cinque Terre

0