ವಿಜಯಪುರ : ಜಿಲ್ಲೆಯ ಝಳಕಿ ಸಮೀಪದ ಎಚ್ ಪಿ ಪೆಟ್ರೋಲ್ ಪಂಪ್ ಬಳಿ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಲಾರಿ ಧಗಧಗಿಸಿದೆ.
ಗುಜರಾತ್ ನಿಂದ ಫೈಬರ್ ಕೇಬಲ್ ತುಂಬಿಕೊಂಡು ಹೊರಟಿದ್ದ ಲಾರಿ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಕಾಣಿಸಿಕೊಂಡ ತಕ್ಷಣ ಲಾರಿಯಿಂದ ಕೆಳಗಿಳಿದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗುದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಸಂಭವಿಸಿದೆ.
ಲಾರಿಗೆ ಬೆಂಕಿ ಹೊತ್ತಿಕೊಂಡ ಸ್ಥಳದ ಅಣತಿ ದೂರದಲ್ಲಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಇತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.
PublicNext
06/05/2022 10:47 pm