ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಸಂಸದ ಜಿ.ಎಂ ಸಿದ್ದೇಶ್ವರ್ ಒಡೆತನದ ಜಿಎಂಐಟಿ ಕಟ್ಟಡದಲ್ಲಿ ಬೆಂಕಿ ಅವಘಡ

ದಾವಣಗೆರೆ: ಸಂಸದ ಜಿ.ಎಂ ಸಿದ್ದೇಶ್ವರ ಒಡೆತನದ ಜಿಎಂಐಟಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಕಟ್ಟಡದಲ್ಲಿನ ಬಿಎಸ್ಎನ್ಎಲ್ ಟವರ್‌ನ ಬ್ಯಾಟರಿ ಬಾಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿ ಉರಿಯುತ್ತಿರುವುದನ್ನ ಗಮನಿಸಿದ ಜಿಎಂಐಟಿ ಸಿಬ್ಬಂದಿ ತಕ್ಷಣ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Edited By : Nagesh Gaonkar
PublicNext

PublicNext

09/05/2022 07:54 am

Cinque Terre

75.8 K

Cinque Terre

1

ಸಂಬಂಧಿತ ಸುದ್ದಿ