ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಗುರುವಾರ ಚೂನಮ್ಮದೇವಿ ಜಾತ್ರಾ ನಿಮಿತ್ತ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಈ ವೇಳೆ ಗಣ್ಯರು ಕುಳಿತಿದ್ದ ವೇದಿಕೆ ಸೌಂಡ್ ಸಿಸ್ಟಮ್ ಮತ್ತು ಹೈಮಾಸ್ಕ್ ಅಳವಡಿಸಿದ್ದ ಕಂಬ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವೇದಿಕೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವಘಡದ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
13/05/2022 03:15 pm