ಮೈಸೂರು: 40ಕ್ಕೂ ಅಧಿಕ ಮಂದಿ ಗಾಯಗೊಂಡು, ಕೆಲವರ ಪರಿಸ್ಥಿತಿ ಗಂಭೀರವಾದಂತಹ ಭೀಕರ ಅಪಘಾತವೊಂದು ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಬಳಿ ಹಾಸನ-ಮೈಸೂರು ಹೆದ್ದಾರಿಯಲ್ಲಿ ಬಸ್ ಮತ್ತು ಕ್ಯಾಂಟರ್ ಮುಖಾಮುಖಿಯಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರು ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಬಸ್ ಹಾಗೂ ಕ್ಯಾಂಟರ್ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
PublicNext
18/05/2022 06:47 pm