ಕೊಡಗು: ಮಳೆಗೆ ರಸ್ತೆ ಕಾಣದೆ ಎರಡು ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲೂಕಿನ ಕೊಡಗರಹಳ್ಳಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸುಂಟಿಕೊಪ್ಪ ನಿವಾಸಿ ಮುಸ್ತಾಫ್ (47) ಮೃತ ದುರ್ದೈವಿ. ಕುಶಾಲನಗರ ಕಡೆಗೆ ಹೋಗುತ್ತಿದ್ದ ಇನೋವಾ, ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ XUV ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
18/05/2022 07:37 pm