ಹೊಸದಿಲ್ಲಿ: ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿ 6 ಮಂದಿ ಗಾಯಗೊಂಡ ಘಟನೆ ಈಶಾನ್ಯ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ.
ಇನ್ನು ಮಧ್ಯಾಹ್ನದ ವೇಳೆ ಎಲೆಕ್ಟ್ರಿಕ್ ವಸ್ತುಗಳ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಇನ್ನು ಇನ್ವರ್ಟರ್ಗಳು ಮತ್ತು ಸ್ಟೇಬಿಲೈಸರ್ ಗಳಂತಹ ಎಲೆಕ್ಟ್ರಿಕ್ ವಸ್ತುಗಳನ್ನು ತಯಾರಿಸುವ ಕಾರ್ಖಾನೆಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಗಾಯಗೊಂಡಿದ್ದು ಅವರನ್ನು ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ.
PublicNext
19/05/2022 04:05 pm