ತುಮಕೂರು: ಗುಬ್ಬಿ-ಯಡೆಯೂರು ಮುಖ್ಯರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಇಬ್ಬರು ಬೈಕ್ ಸವಾರರು ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ತುರುವೇಕೆರೆ ತಾಲ್ಲೂಕಿನ ಸಿಗೇಹಳ್ಳಿ ಬಳಿ ಘಟನೆ ನಡೆದಿದ್ದು ಮೃತರನ್ನ ಶಿರಾದ ಭೂಕನಹಳ್ಳಿಯವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಡಿಕ್ಕಿಯಾದ ರಭಸಕ್ಕೆ ಎರಡೂ ಬೈಕ್ ಗಳು ಪೀಸ್ ಪೀಸ್ ಆಗಿದ್ದು ಭೀಕರ ದೃಶ್ಯ ಕಂಡ ಸ್ಥಲೀಯರು ದಿಗ್ಭ್ರಮೆಗೊಂಡಿದ್ದಾರೆ. ಅತಿಯಾದ ವೇಗ ಘಟನೆ ಕಾರಣ ಎಂದು ಹೇಳಲಾಗ್ತಿದೆ. ಎರಡೂ ಬೈಕ್‌ನಲ್ಲಿ ತ್ರಿಪಲ್ ರೈಡ್ ಹೋಗುತ್ತಿದ್ದರು ಎನ್ನಲಾಗಿದೆ. ಅಲ್ಲದೇ ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಗಾಯಾಳುಗಳನ್ನು ತುರುವೇಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ತುರುವೇಕೆರೆ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
PublicNext
21/05/2022 03:04 pm