ಲಕ್ನೋ: ರಸ್ತೆ ಬದಿ ನಿಲ್ಲಿಸಿದ್ದ ಕಸ ಸಾಗಿಸುವ ಟ್ರಕ್ಗೆ ಬುಲೆರೋ ಕಾರು ಡಿಕ್ಕಿ ಹೊಡೆದ ಪರಿಣಾಮ 9 ಜನರು ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗೋರಖ್ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ಧಾರ್ಥನಗರ ಜಿಲ್ಲೆಯ ನೌಘರ್-ಬನ್ಸಿ ರಸ್ತೆಯಲ್ಲಿರುವ ಕಟ್ಯಾ ಗ್ರಾಮದ ಬಳಿ ಈ ದುರಂತ ನಡೆದಿದೆ. ಮೃತರು ಮಹ್ಲಾ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದಲ್ಲಿ ಭಾಗವಹಿಸಿ ರಾತ್ರಿ ಮರಳಿ ಬರುತ್ತಿದ್ದರು. ಈ ವೇಳೆ ಬುಲೆರೋ ಚಾಲಕ ನಿದ್ರೆ ಮಂಪರಿನಲ್ಲಿ ರಸ್ತೆ ನಿಲ್ಲಿಸಿದ್ದ ಟ್ರಕ್ಗೆ ಗುದ್ದಿದ್ದಾನೆ ಎಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ ಮೃತಪಟ್ಟ 9 ಜನರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯವು ಪರಿಹಾರ ಘೋಷಿಸಿದೆ. ರಾಷ್ಟ್ರೀಯ ವಿಪತ್ತು ನಿಧಿಯಡಿ ಮೃತರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತನ್ನ ಟ್ವೀಟ್ನಲ್ಲಿ ತಿಳಿಸಿದೆ.
PublicNext
22/05/2022 02:58 pm