ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಗೋವಾದಲ್ಲಿ ಕಾರು ಅಪಘಾತ: ಬೆಳಗಾವಿಯ ಮೂವರು ಯುವಕರ ಸಾವು

ಬೆಳಗಾವಿ: ಗೋವಾದ ಮಾಪ್ಸಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ‌.

ಮಾಪ್ಸಾ ಜಿಲ್ಲೆಯ ಕುಛೇಲಿ ಬಳಿ ಇಂದು ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ಬೆಳಗಾವಿ ಮೂಲದ ನಾಯರ್ ಅನಗೋಲ್ಕರ್(28), ರೋಹನ್ ಗದಗ(26) ಸನ್ನಿ ಅವನೇಕರ್(31) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಪ್ರಯಾಣಿಕ ವಿಶಾಲ್ ಕರಜೇಕರ್‌ಗೆ ಗಂಭೀರ ಗಾಯಗಳಾಗಿವೆ. ಆತನನ್ನು ಗೋವಾದ ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Manjunath H D
PublicNext

PublicNext

22/05/2022 03:12 pm

Cinque Terre

64.54 K

Cinque Terre

0