ಮಹಾರಾಷ್ಟ್ರ: ಮುಂಬೈ-ಅಹಮದಾಬಾದ್ ಹೆದ್ದಾರಿಯ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಗೋಭಾ ಖಿಂದ್ ಎಂಬಲ್ಲಿ ಶುಕ್ರವಾರ ಮುಂಜಾನೆ ಬಸ್ ವೊಂದು ಸುಮಾರು 25 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ 15 ಜನ ಪ್ರಯಾಣಿಕರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (MSRTC) ಬಸ್ ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಭೂಸಾವಲ್ ನಿಂದ ಪಾಲ್ಘರ್ ನ ಬೋಯಿಸರ್ ಗೆ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸದ್ಯ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಈ ಅವಘಡಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
PublicNext
27/05/2022 11:07 am