ಶ್ರೀನಗರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಮಂದಿ ಯೋಧರು ಹುತಾತ್ಮರಾಗಿದ್ದು, ಹಲವಾರು ಸೈನಿಕರು ಗಾಯಗೊಂಡಿರುವ ಘಟನೆ ಇಂದು (ಮೇ 27) ಜಮ್ಮು ಮತ್ತು ಕಾಶ್ಮೀರದ ಲಡಾಖ್‌ನ ಟುರ್ ಟುಕ್ ಸೆಕ್ಟರ್‌ನಲ್ಲಿ ನಡೆದಿದೆ.
26 ಮಂದಿ ಸೈನಿಕರು ಸೇನಾ ವಾಹನದಲ್ಲಿ ಸಾಗುತ್ತಿದ್ದ ವೇಳೆ ಸ್ಕಿಡ್ ಆಗಿ ಲಡಾಕ್‌ನಲ್ಲಿ ಶ್ಯೋಕ್ ನದಿಗೆ ಬಿದ್ದಿದೆ. 26 ಮಂದಿ ಸೈನಿಕರ ತಂಡವು ಪಾರ್ತಾಪುರದ ಟ್ರಾನ್ಸಿಟ್ ಕ್ಯಾಂಪ್‌ನಿಂದ ಉಪ ವಲಯದ ಹನೀಫ್‌ನ ಮುಂದಿನ ಸ್ಥಳಕ್ಕೆ ತೆರಳುತ್ತಿತ್ತು. ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಶ್ಯೋಕ್ ನದಿಯಲ್ಲಿ ಬಿದ್ದಿತು, ಇದರ ಪರಿಣಾಮವಾಗಿ ಎಲ್ಲಾ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
"ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ವೆಸ್ಟರ್ನ್ ಕಮಾಂಡ್‌ಗೆ ಸ್ಥಳಾಂತರಿಸಲು ವಾಯುಪಡೆಯಿಂದ ನೆರವನ್ನು ಕೋರಲಾಗಿದೆ'' ಎಂದು ಭಾರತೀಯ ಸೇನೆ ತಿಳಿಸಿದೆ.
PublicNext
27/05/2022 06:03 pm