ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಸ್- ಟ್ರಕ್ ಮುಖಾಮುಖಿ : ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಜನರ ದುರ್ಮರಣ

ಲಕ್ನೋ: ಪ್ರವಾಸಿ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕರ್ನಾಟಕದಿಂದ 16 ಜನ ಬಸ್ ನಲ್ಲಿ ಅಯೋಧ್ಯೆಗೆ ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್ ಗೆ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Edited By : Nirmala Aralikatti
PublicNext

PublicNext

29/05/2022 11:28 am

Cinque Terre

47.88 K

Cinque Terre

0

ಸಂಬಂಧಿತ ಸುದ್ದಿ