ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ದಿಬ್ಬಣದ ಬಸ್ ಪಲ್ಟಿ- ಇಬ್ಬರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಕಲಬುರಗಿ: ಮದುವೆಗೆ ಹೋಗಿ ವಾಪಸ್ ಆಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಹಾಗೂ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ತಾಂಡಾಬಳಿ ನಡೆದಿದೆ.

ಕಲಬುರಗಿ ತಾಲೂಕಿನ ಹಾವನೂರ್ ಗ್ರಾಮದ ನಿವಾಸಿಗಳಾದ ಶಿವಕುಮಾರ್ ಹಾಗೂ ಇನ್ನೋರ್ವ ಮಹಿಳೆ ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸ್‌ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಸ್ ಉರುಳಿದ್ದಿದೆ. ಪರಿಣಾಮ ಐದು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರೆಲ್ಲರಿಗೂ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇನ್ನು ಬಸ್‌ನ​ಲ್ಲಿದ್ದ ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅವರಿಗೆ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ನ ಅಡಿ ಸಿಲುಕಿದವರನ್ನು ಗ್ರಾಮಸ್ಥರ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಜೆಸಿಬಿ ಮೂಲಕ ಪಲ್ಟಿಯಾಗಿರುವ ಬಸ್ಅನ್ನು ಮೇಲೆತ್ತಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಕಲಬುರಗಿ ಸಂಚಾರಿ ಒನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

01/06/2022 10:51 pm

Cinque Terre

40.56 K

Cinque Terre

0

ಸಂಬಂಧಿತ ಸುದ್ದಿ