ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ತಡರಾತ್ರಿ ಭೀಕರ ಅಪಘಾತ: ನಾಲ್ವರು ಸಾವು

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿಯ ರಾಷ್ಟ್ರೀಯ ಹೆದ್ದಾರಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ‌.

ನಿನ್ನೆ ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ರಾಮಸ್ವಾಮಿ, ನಾಸೀರ್ ಮುಲ್ಲಾ, ಮಲ್ಲಪ್ಪ ಮಳಲಿ, ರಜಾಕ್ ತಾಂಬೋಳಿ ಮೃತಪಟ್ಟ ದುರ್ದೈವಿಗಳು. ಮೃತರು ಪಯಣಿಸುತ್ತಿದ್ದ ಕ್ಯಾಂಟರ್ ವಾಹನ ಪಂಚರ್ ಆಗಿದ್ದ ಕಾರಣ, ಪಂಚರ್ ತೆಗೆಸುವಾಗ ಇನ್ನೊಂದು ವಾಹನ ಏಕಾಏಕಿ ನುಗ್ಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

ಎಲ್ಲ ಮೃತರು ಬೀಳಗಿ ಮೂಲದವರು ಎಂಬ ಮಾಹಿತಿ ಇದೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ‌.

Edited By : Nagaraj Tulugeri
PublicNext

PublicNext

03/06/2022 08:30 am

Cinque Terre

44.23 K

Cinque Terre

1

ಸಂಬಂಧಿತ ಸುದ್ದಿ