ಉತ್ತರಕಾಶಿ: ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯ ದಮ್ಟಾ ಬಳಿ ಯಾತ್ರಿಕರ ಬಸ್ ಕಂದಕಕ್ಕೆ ಉರುಳಿದೆ. ಪರಿಣಾಮ 17 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಇಲ್ಲಿವರೆಗಿನ ಮಾಹಿತಿ ಪ್ರಕಾರ 15 ಶವಗಳನ್ನು ಹೊರತೆಗೆಯಲಾಗಿದೆ. ಉಳಿದ ಮೃತದೇಹ ಹಾಗೂ ಬದುಕುಳಿದವರನ್ನು ರಕ್ಷಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ. ಇದು ಯಮುನಾ ನದಿಯ ಕಂದಕ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
05/06/2022 09:10 pm