ಮುಂಬೈ: ಸಾವು ಯಾವಾಗ ಯಾರಿಗೆ ಹೇಗೆ ಬರುತ್ತೆ ಎಂದು ಹೇಳಲು ಅಸಾಧ್ಯ. ಗಾಯಗೊಂಡಿದ್ದ ಪಕ್ಷಿಯನ್ನು ರಕ್ಷಿಸಲು ಕಾರ್‌ನಿಂದ ಕೆಳಗಿಳಿದ ಇಬ್ಬರಿಗೆ ಟ್ಯಾಕ್ಸಿ ಡಿಕ್ಕಿ ಹೊಡೆದಿದ್ದು, ಇಬ್ಬರೂ ಸಾವನ್ನಪ್ಪಿರುವ ಕರುಣಾಜನಕ ಘಟನೆ ಬಾಂದ್ರಾ-ವರ್ಲಿ ಸೀ ಲಿಂಕ್ ರಸ್ತೆಯಲ್ಲಿ ನಡೆದಿದೆ.
ಮೇ 30 ರಂದು ಬಾಂದ್ರಾ-ವರ್ಲಿ ಸೀ ಲಿಂಕ್ ರಸ್ತೆಯಲ್ಲಿ ಗಾಯಗೊಂಡ ಪಕ್ಷಿಯನ್ನು ರಕ್ಷಿಸಲು ಕಾರಿನಿಂದ ಇಳಿದ 43 ವರ್ಷದ ಉದ್ಯಮಿ ಮತ್ತು ಅವರ ಚಾಲಕನಿಗೆ ಟ್ಯಾಕ್ಸಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಾಂದ್ರಾ ವರ್ಲಿ ಸೀ ಲಿಂಕ್ ಮಾರ್ಗದಲ್ಲಿ ಅವರ ಕಾರಿಗೆ ಒಂದು ಹಕ್ಕಿ ಡಿಕ್ಕಿ ಹೊಡೆದಿದೆ. ನಂತರ ಗಾಯಗೊಂಡ ಪಕ್ಷಿಯನ್ನು ಉಳಿಸಲು ಅಮರ್ ಮನೀಷ್ ಜರಿವಾಲಾ ಕೆಳಗಿಳಿದರು. ವೇಗವಾಗಿ ಬಂದ ಟ್ಯಾಕ್ಸಿ ಜರಿವಾಲಾ ಮತ್ತು ಅವರ ಡ್ರೈವರ್ ಶ್ಯಾಮ್ ಸುಂದರ್ ಕಾಮತ್ ಅವರಿಗೆ ಡಿಕ್ಕಿ ಹೊಡೆದಿದೆ. ಜರಿವಾಲಾರನ್ನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರೆ, ಚಾಲಕ ಶ್ಯಾಮ್ ಸುಂದರ್ ಕಾಮತ್ ಆಸ್ಪತ್ರೆಯಲ್ಲಿ ಮೃತಪಟ್ಟರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯಾಕ್ಸಿ ಚಾಲಕ ರವೀಂದ್ರ ಕುಮಾರ್ ಜೈಸ್ವರ್ ವಿರುದ್ಧ ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಲಾಗಿದ್ದು ಬಂಧಿಸಲಾಗಿದೆ ಎಂದು ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
PublicNext
13/06/2022 10:33 pm