ದಾವಣಗೆರೆ: ಟ್ರ್ಯಾಕ್ಟರ್ ಹಾಗೂ ಶಾಲಾ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಮಕ್ಕಳು ಅಪಾಯದಿಂದ ಪಾರಾದ ಘಟನೆ ದಾವಣಗೆರೆಯ ಹೊಸ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಸದ್ಯ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟ ವಶಾತ್ ಮಕ್ಕಳಿಗೇನೂ ಆಗಿಲ್ಲ. ಕೋಳಿ ಫುಡ್ ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಹಾಗೂ ಶಾಲೆ ಮುಗಿಸಿ ಮಕ್ಕಳನ್ನು ಮನೆಗೆ ಬಿಡಲು ತೆರಳುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಪುಷ್ಪ ಮಹಾಲಿಂಗಪ್ಪ ಶಾಲೆಗೆ ಸೇರಿದ ಬಸ್ ಇದಾಗಿದ್ದು, ಹಳೇ ಕುಂದುವಾಡದಿಂದ ದಾವಣಗೆರೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಶಾಲಾ ಬಸ್ ಜಖಂಗೊಂಡಿದೆ. ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂದಲೆಳೆ ಅಂತರದಿಂದ ಬಚಾವಾಗಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
17/06/2022 08:01 pm