ನವದೆಹಲಿ: ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪಾಟ್ನಾ-ದೆಹಲಿ ಸ್ಪೈಸ್ ಜೆಟ್ ವಿಮಾನವನ್ನು ತಕ್ಷಣ ಲ್ಯಾಂಡ್ ಮಾಡಲಾಗಿದ್ದು, ಲ್ಯಾಂಡಿಂಗ್ ಸುರಕ್ಷಿತವಾಗಿದೆ ಎಂದು ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ, ವಿಮಾನವು ಪಾಟ್ನಾ ವಿಮಾನ ನಿಲ್ದಾಣದಿಂದ ದೆಹಲಿಯೆಡೆಗೆ ಹೊರಟಿತ್ತು. ಟೇಕ್ ಆಫ್ ಆದ ಕೂಡಲೇ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 180ಕ್ಕೂ ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿದ್ದರು ಮತ್ತು ಯಾರಿಗೂ ಏನೂ ಗಾಯವಾದ ಬಗ್ಗೆ ವರದಿಯಾಗಿಲ್ಲ.
PublicNext
19/06/2022 04:02 pm