ತುಮಕೂರು: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಇಂದು ಬೆಳಂ ಬೆಳಗ್ಗೆ ನಡೆದಿದೆ.
ಮೃತರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಗಿರೀಶ್(37) ಹಾಗೂ ಮಾನ್ಯ(17) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರಾಕೇಶ್ (21) ಗಂಭೀರ ಗಾಯಗೊಂಡಿದ್ದಾರೆ. ಇನ್ನು ಕೆಎಸ್‌ಆರ್‌ಟಿಸಿ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಗುಬ್ಬಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ರಾಕೇಶ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/06/2022 10:21 am