ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ನಡೆದಿದೆ.
ಬೆಂಗಳೂರಿನ ರಾಜಾಜಿನಗರದ ಮೂಲದ ನರಸಿಂಹರಾಜ್ (46), ಕಿರಣ್ (23) ಮೃತ ದುರ್ದೈವಿಗಳು. ಧರ್ಮಸ್ಥಳಕ್ಕೆ ತೆರಳಿ ವಾಪಸ್ ಹೋಗುವಾಗ ಈ ಅವಘಡ ಸಂಭವಿಸಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/06/2022 12:47 pm