ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಟೋಗೆ ಟ್ರಕ್ ಡಿಕ್ಕಿ- 8 ಜನ ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಲಕ್ನೋ: ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಜನರು ಸಾವನ್ನಪ್ಪಿದ ಹಾಗೂ 7 ಮಂದಿ ಗಾಯಗೊಂಡ ಭೀಕರ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಬುಧವಾರ ಸಂಜೆ ನಡೆದಿದೆ.

ಹಮೀರ್‌ಪುರ ಜಿಲ್ಲೆಯ ಮೌದಾಹಾ ಕೊಟ್ವಾಲಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲೋಡರ್ ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಸಂಭವಿಸಿದ ಅಪಘಾತವು ತುಂಬಾ ನೋವಿನಿಂದ ಕೂಡಿದೆ. ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಗಾಯಗೊಂಡವರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತವು ಗಮನ ಹರಿಸಿದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Edited By : Vijay Kumar
PublicNext

PublicNext

23/06/2022 11:38 am

Cinque Terre

24.84 K

Cinque Terre

0

ಸಂಬಂಧಿತ ಸುದ್ದಿ