ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಂದಕಕ್ಕೆ ವಾಹನ ಉರುಳಿ 10 ಜನ ಯಾತ್ರಾರ್ಥಿಗಳು ಸಾವು

ಲಕ್ನೋ : ಚಾಲಕನ ನಿಯಂತ್ರಣ ತಪ್ಪಿದ ವಾಹನವು ಕಂದಕಕ್ಕೆ ಉರುಳಿ ಬಿದ್ದು ಮೂವರು ಮಕ್ಕಳು ಸೇರಿದಂತೆ 10 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಜ್‌ರೌಲಾ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಲಕ್ಷ್ಮಿ (28), ರಚನಾ (28), ಸರಳಾ ದೇವಿ (60), ಹರ್ಷ್ (16), ಖುಷಿ (2), ಸುಶಾಂತ್ (14), ಆನಂದ್ (3), ಲಾಲ್‌ಮನ್ (65), ಶ್ಯಾಮಸುಂದರ್ (55) ಮತ್ತು ಚಾಲಕ ದಿಲ್ಶಾದ್ (35) ಎಂದು ಗುರುತಿಸಲಾಗಿದೆ. ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಕಡೆಗೆ ಸಾಗುತ್ತಿದ್ದಾಗ ಲಕ್ನೋ ಹೆದ್ದಾರಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ.

ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇನ್ನು ಹತ್ತು ಜನ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದೇ ಅಪಘಾತಕ್ಕೆ ಕಾರಣವಾಗಿದ್ದು, ಇದರಿಂದಾಗಿ ವಾಹನದ ನಿಯಂತ್ರಣ ಕಳೆದುಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Edited By : Vijay Kumar
PublicNext

PublicNext

23/06/2022 03:53 pm

Cinque Terre

34.58 K

Cinque Terre

0

ಸಂಬಂಧಿತ ಸುದ್ದಿ