ಅಮರಾವತಿ: ಚಲಿಸುತ್ತಿದ್ದ ಆಟೋ ಮೇಲೆ ಹೈ ಟೆನ್ಶನ್ ವೈರ್ ಬಿದ್ದ ಪರಿಣಾಮ 8 ಮಂದಿ ಸಜೀವವಾಗಿ ದಹನಗೊಂಡ ದಾರುಣ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತಾಡಿಮರ್ರಿ ವಲಯದ ಚಿಲ್ಲಕೊಂಡಯ್ಯಪಲ್ಲಿಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಗುಡ್ಡಂಪಲ್ಲಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಆಟೋದಲ್ಲಿ 10ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಎಲ್ಲರೂ ಕೃಷಿ ಕೆಲಸಕ್ಕೆಂದು ಆಟೋದಲ್ಲಿ ಚಿಲ್ಲಕೊಂಡಯ್ಯಪಲ್ಲಿಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲವು ದಿನಗಳಿಂದ ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಹೈ ಟೆನ್ಶನ್ ವೈರ್ಗಳು ಜೋತು ಬಿದ್ದಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು ಎನ್ನಲಾಗಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ಘಟನೆಯನ್ನು ಗಾಯಗೊಂಡಿದ್ದ ಇಬ್ಬರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ.
PublicNext
30/06/2022 02:37 pm