ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಬಸ್ ಕಾರು ಅಪಘಾತ ಮೂವರ ಸ್ಥಳದಲ್ಲೇ ಸಾವು

ತುಮಕೂರು : ಮತ್ತಿಹಳ್ಳಿ ಗೇಟ್ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಬಸ್ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ.

ಹೌದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಕಾರು ನಡುವೆ ಭೀಕರ ಅಪಘಾತವಾಗಿದೆ. ತಿಪಟೂರು ಕಡೆಯಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಕಾರು ಎದುರು ಬಂದ ಬಸ್ ಗೆ ಗುದ್ದಿದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಹೊನ್ನವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಾವನ್ನಪ್ಪಿದವರ ಪತ್ತೆಗಾಗಿ ಹರಸಾಹಸ ಪಡುತ್ತಿದ್ದಾರೆ. ಇನ್ನು ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Edited By :
PublicNext

PublicNext

07/07/2022 10:33 am

Cinque Terre

96.73 K

Cinque Terre

0

ಸಂಬಂಧಿತ ಸುದ್ದಿ