ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆಬದಿ ಮಲಗಿದ್ದ ಗ್ರಾಮಸ್ಥರ ಮೇಲೆ ಹರಿದ ಪಿಕಪ್ ವಾಹನ; ಏಳು ಮಂದಿ ದಾರುಣ ಸಾವು

ಲಕ್ನೋ: ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ತನ್ನ ಅಟ್ಟಹಾಸ ಮೆರೆದಿದ್ದಾನೆ. ರಸ್ತೆಬದಿಯಲ್ಲಿ ಮಲಗಿದ್ದ ಗ್ರಾಮಸ್ಥರ ಮೇಲೆ ಪಿಕಪ್ ವಾಹನ ಹರಿದ ಪರಿಣಾಮ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಚಿತ್ರಕೂಟ ಜಿಲ್ಲೆಯ ಝಾನ್ಸಿ-ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿಯ ಭರತ್‌ಕುಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಬದಿಯಲ್ಲಿ ಮಲಗಿದ್ದ ಗ್ರಾಮಸ್ಥರ ಮೇಲೆ ಟೊಮೆಟೊ ತುಂಬಿದ ಪಿಕಪ್ ವಾಹನ ಹರಿದು ಈ ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಕೆಲವು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಈ ದುರಂತದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

Edited By : Vijay Kumar
PublicNext

PublicNext

09/07/2022 03:24 pm

Cinque Terre

33.28 K

Cinque Terre

1

ಸಂಬಂಧಿತ ಸುದ್ದಿ