ಚಿಕ್ಕೋಡಿ: ಬಿಹಾರದ ಕಿಶನ್ಗಂಜ್ ಸರ್ದಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿ ಸೂರಜ್ ಸುತಾರ್ (32) ಅಪಘಾತದಲ್ಲಿ ಸಾವನ್ನಪ್ಪಿರುವ ಯೋಧ. ಸೂರಜ್ ಕಳೆದ 10 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಮಾಡುತ್ತಿದ್ದರು. ನಿನ್ನೆ (ಸೋಮವಾರ) ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಆಟೋದಿಂದ ಇಳಿದು ರಸ್ತೆ ದಾಟುವಾಗ ಸೂರಜ್ ಸುತಾರ್ ಅವರಿಗೆ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಯೋಧ ಸೂರಜ್ಗೆ ಕಳೆದ ಎರಡು ವರ್ಷಗಳ ಹಿಂದಷ್ಟೇ ಮದುವೆ ಆಗಿತ್ತು. ಸೂರಜ್ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಾಳೆ ಪಶ್ಚಿಮ ಬಂಗಾಳದಿಂದ ಸ್ವಗ್ರಾಮ ಯಡೂರುವಾಡಿಗೆ ಪಾರ್ಥಿವ ಶರೀರ ಬರಲಿದ್ದು, ಅಂತ್ಯಸಂಸ್ಕಾರ ನೆರವೇರಲಿದೆ.
PublicNext
19/07/2022 06:20 pm